ರಾಜ್ಯ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿರುವ ರೇಣುಕಾಸ್ವಾಮಿ ಕುಟುಂಬಸ್ಥರಿಗಾಗಿ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಚಾರ್ಜ್‌ಶೀಟ್‌ ಸಲ್ಲಿಕೆಯಾಗಲಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಎ1, ಎ2 ಆರೋಪಿಗಳನ್ನಾಗಿ ಮಾಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದರು.

ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿದ್ದಾರೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಅವರಿಗೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಇದೇ ವೇಳೆ ಗೃಹ ಸಚಿವರ ಮನೆ ಬಳಿ ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ಕರೆದೊಯ್ದರು. ಈ ವೇಳೆ ತರಾಟೆಗೆ ತೆಗೆದುಕೊಂಡ ಪರಮೇಶ್ವರ್‌ ಅವರು, ಜನರು ಅಹವಾಲು ನೀಡಲು ಬಂದಾಗ ಸುಮ್ಮನೆ ನಿಂತುಕೊಂಡು ನೋಡಬೇಕು. ಇನ್ನೊಮ್ಮೆ ಈ ರೀತಿ ನಡೆದುಕೊಳ್ಳದಂತೆ ಸೂಚಿಸಿದರು.

ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಇಲ್ಲಿಗೆ ಬರುತ್ತಾರೆ. ಅವರು ನಮ್ಮ ಬಳಿ ಬಾರದೇ ಇನ್ಯಾರ ಬಳಿ ಹೋಗಲು ಸಾಧ್ಯ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

24 mins ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

1 hour ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

2 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

9 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

9 hours ago