ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ಕೊಲೆ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್.‌25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಅದೇ ದಿನ ಆರೋಪಿಗಳ ವಿರುದ್ಧ ಪೊಲೀಸರು ಹೊರಿಸಿರುವ ರೇಣುಕಾಸ್ವಾಮಿ ಅಪಹರಣ, ಕೊಲೆ, ಸುಲಿಗೆ, ಸಾಕ್ಷ್ಯನಾಶ ಸೇರಿದಂತೆ ಇತರೆ ದೋಷಾರೋಪಗಳು ನಿಗದಿಯಾಗಲಿದೆ.

ಇದನ್ನು ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್‌ ಸಲ್ಲಿಸಿದ ಅರ್ಜಿ ಕುಡಿತ ಆದೇಶವನ್ನು ಸೆಪ್ಟೆಂಬರ್.‌25ರಂದು ನ್ಯಾಯಾಲಯ ಪ್ರಕಟಿಸಲಿದೆ.

ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್‌ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಈ ಕುರಿತಾದ ಆದೇಶವು ಸೆಪ್ಟೆಂಬರ್.‌25ರಂದು ಪ್ರಕಟವಾಗಲಿದೆ.

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದೀಪಕ್‌ ಮತ್ತು ಪ್ರದೋಷ್‌ ಅವರನ್ನು ದೋಷಾರೋಪದಿಂದ ಕೈಬಿಡಲು ಕೋರ್ಟ್‌ ನಿರಾಕರಿಸಿದ್ದು, ಈ ಕುರಿತಾದ ಅರ್ಜಿಯನ್ನು ವಜಾಗೊಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

7 hours ago