Mysore
21
overcast clouds
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಕ್ರಿಮಿನಲ್‌ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್.‌ ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್‌ ಮೌನವಾಗಿರುವುದು ಏಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಮೈಸೂರು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮೌನವಾಗಿಲ್ಲ. ಇದನ್ನೇ ಪ್ರತಿನಿತ್ಯ ಮಾತನಾಡಲು ಸಾಧ್ಯವಿಲ್ಲ. ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯರಿಗೆ ನಾನು ಮೊದಲೇ ಸಲಹೆ ನೀಡಿದ್ದೆ ಎಂದರು.