ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್. ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಮೌನವಾಗಿರುವುದು ಏಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮೈಸೂರು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮೌನವಾಗಿಲ್ಲ. ಇದನ್ನೇ ಪ್ರತಿನಿತ್ಯ ಮಾತನಾಡಲು ಸಾಧ್ಯವಿಲ್ಲ. ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್ ಕೊಡಿ ಎಂದು ಸಿಎಂ ಸಿದ್ದರಾಮಯ್ಯರಿಗೆ ನಾನು ಮೊದಲೇ ಸಲಹೆ ನೀಡಿದ್ದೆ ಎಂದರು.
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…