ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಅಕ್ಟೋಬರ್.31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದರು.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಿಂದ ಕೈಬಿಡುವಂತೆ 5ನೇ ಆರೋಪಿ ನಂದೀಶ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇನ್ನು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್.31ಕ್ಕೆ ನಿಗದಿಪಡಿಸಿದ ಕೋರ್ಟ್, ತಿಂಗಳಿಗೊಮ್ಮೆ ಚಾದರ್ ಬಟ್ಟೆ ಒದಗಿಸಲು ಸೂಚನೆ ನೀಡಿದೆ. ಹಾಗೆಯೇ ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡುವ ಆಯ್ಕೆಯನ್ನು ಜೈಲಾಧಿಕಾರಿಗಳಿಗೆ ನೀಡಿತು. ಸಾಧ್ಯವಾದರೆ ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಲು ಸೂಚನೆ ನೀಡಿತು.





