ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್ ಶಾಕ್ ನೀಡಿದೆ.
ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಅನುಮತಿ ನೀಡಿ ಕಡತ ರವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಾಮೀನು ರದ್ದು ಕೋರಿ ಮೆರಿಟ್ಸ್ ಆಫ್ ದಿ ಕೇಸ್ ಮೇಲೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುತ್ತದೆ ಎನ್ನಲಾಗಿದ್ದು, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದು ಕೋರಿಯೂ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಜಾಮೀನು ಸಿಗುತ್ತಿದ್ದಂತೆ ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಬೆನ್ನಲ್ಲೇ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದ್ದು, ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದಾರೆ.





