ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.
ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್ಸ್ಟಾಗ್ರಾಂ ಅನ್ನು ಕೋರಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…