ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಇನ್ನುಳಿದ 17 ಆರೋಪಿಗಳಿಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು, ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆ.30ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.