ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ. ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು, ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ. ಈ ನಡುವೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ ಎಂದು ಸ್ಷಷ್ಟಪಡಿಸಿದ್ದಾರೆ.
ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಬರೆದುಕೊಂಡಿದ್ದಾರೆ.