ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ.7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ.
ಕಳೆದ ಎರಡು ತಿಂಗಳಿನಿಂದಲೂ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಅವರು ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಈಗಾಗಲೇ ಸೆಪ್ಟೆಂಬರ್.9ರವರೆಗೂ ವಿಸ್ತರಿಸಿದೆ.
ಈಗ ಕೋರ್ಟ್ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ನಟಿ ಪವಿತ್ರಾ ಗೌಡಗೆ ಭಾರೀ ನಿರಾಸೆಯಾಗಿದೆ.