ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ.7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್‌ ವಜಾಗೊಳಿಸಿದೆ.

ಕಳೆದ ಎರಡು ತಿಂಗಳಿನಿಂದಲೂ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಅವರು ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಈಗಾಗಲೇ ಸೆಪ್ಟೆಂಬರ್‌.9ರವರೆಗೂ ವಿಸ್ತರಿಸಿದೆ.

ಈಗ ಕೋರ್ಟ್‌ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ನಟಿ ಪವಿತ್ರಾ ಗೌಡಗೆ ಭಾರೀ ನಿರಾಸೆಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

17 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

23 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

27 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago