Mysore
22
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ.

ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್‌ ಜಾಮೀನು ನೀಡಿತ್ತು.

ನಂತರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು, ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌, ಪವಿತ್ರಾಗೌಡ ಹಾಗೂ ಗ್ಯಾಂಗ್‌ ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್‌ ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Tags:
error: Content is protected !!