ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ ಮಾರ್ಪಡಿಸಿದೆ.

ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪವಿತ್ರಾ ಗೌಡ, ನಟ ದರ್ಶನ್‌ ಹಾಗೂ ಗ್ಯಾಂಗ್‌, ಮನೆಯೂಟಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್‌ ಗೆ ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಪವಿತ್ರಾ ಗೌಡಗೆ ಪ್ರತಿದಿನ ಮನೆಯೂಟ ನೀಡಲು ಕೋರ್ಟ್‌ ಅವಕಾಶ ನೀಡಿತ್ತು. ಆದರೆ ಜೈಲಾಧಿಕಾರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕೈದಿಯೊಬ್ಬಳಿಗೆ ಪ್ರತಿದಿನ ಮನೆಯೂಟಕ್ಕೆ ಅವಕಾಶ ಕೊಟ್ಟರೆ ಜೈಲಿನಲ್ಲಿರುವ ಸಾವಿರಾರು ಕೈದಿಗಳು ತಮಗೂ ಮನೆಯೂಟ ನೀಡಲು ಅವಕಾಶ ಕೇಳುತ್ತಾರೆ ಎಂದು ಆಕ್ಷೇಪಿಸಿ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಈ ಆದೇಶದಲ್ಲಿ ಮಾರ್ಪಾಡು ಮಾಡಿದೆ. ಪವಿತ್ರಾಗೌಡಗೆ ವಾರಕ್ಕೆ ಒಮ್ಮೆ ಮನೆಯೂಟ ನೀಡಲು ಅವಕಾಶ ನೀಡಿದೆ. ಜೊತೆಗೆ ಆರೋಪಿಗಳಾದ ನಾಗರಾಜು, ಲಕ್ಷ್ಮಣ್‌ಗೂ ಮನೆಯೂಟ ನೀಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

1 hour ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

6 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

6 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

6 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

6 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

6 hours ago