Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ಪವಿತ್ರಾ ಗೌಡ ರಿಲೀಸ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್‌ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ಸೋಮವಾರ ಜಾಮೀನಿನ ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್‌ ಕೂಡ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಕೊಲೆ ಆರೋಪಿಗಳು ತಲಾ ಒಂದು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತದ ಇಬ್ಬರ ಭದ್ರತೆ ನೀಡಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ.

ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿದೆ.

ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ನಟಿ ಪವಿತ್ರಾ ಗೌಡಗೆ ಇದೀಗ ಬಿಗ್‌ ರಿಲೀಫ್‌ ಸಿಕ್ಕಂತಾಗಿದ್ದು, ಜೈಲಿನಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.

 

 

Tags:
error: Content is protected !!