ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
ಸೋಮವಾರ ಜಾಮೀನಿನ ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಕೂಡ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಕೊಲೆ ಆರೋಪಿಗಳು ತಲಾ ಒಂದು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತದ ಇಬ್ಬರ ಭದ್ರತೆ ನೀಡಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ.
ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿದೆ.
ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ನಟಿ ಪವಿತ್ರಾ ಗೌಡಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಜೈಲಿನಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…