ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿದಿನ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕೊಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು.
ಇದಕ್ಕೆ ಜೈಲಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆರೋಪಿಗಳಾದ ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೆ ವಾರದಲ್ಲಿ ಒಂದು ದಿನ ಮನೆ ಊಟಕ್ಕೂ ಬ್ರೇಕ್ ಹಾಕಿದೆ.
ಕಾನೂನು ಎಲ್ಲರಿಗೂ ಒಂದೇ. ಜೈಲಿನಲ್ಲಿರುವ ಆರೋಪಿಗಳಿಗೆ ಸವಲತ್ತು ನೀಡುವಂತಿಲ್ಲ ಎಂದು ಆದೇಶ ನೀಡಿದೆ.





