ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಬಳಿಕ, ಎರಡನೇ ಬಾರಿಗೆ ಸಿಆರ್ಪಿಸಿ ಸೆಕ್ಷನ್ 439ರಡಿ ಅರ್ಜಿ ಸಲ್ಲಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಪ್ರತಿಕೂಲ ಸಾಕ್ಷ್ಯ ನೀಡುತ್ತಿದ್ದಾರೆ. ವಿಚಾರಣೆಯಲ್ಲಿ ತಮ್ಮ ಕಕ್ಷಿದಾರರ ವಿರುದ್ಧ ಆರೋಪ ಬಂದಿಲ್ಲ ಎಂದು ಪವಿತ್ರಾ ಪರ ವಕೀಲರು ಅರ್ಜಿಯಲ್ಲಿ ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.




