ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಪವಿತ್ರಾಗೌಡ ಸುಪ್ರೀಂಕೋರ್ಟ್‌ನಲ್ಲಿ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸೆಷನ್ಸ್ ಕೋರ್ಟ್‌ನಲ್ಲಿ ದೋಷಾರೋಪ ಕೇಳಿದ ನಂತರ ಇದೀಗ ಜಾಮೀನು ಮಂಜೂರು ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನವೆಂಬರ್.6ರಂದು ವಿಚಾರಣೆ ನಡೆಯಲಿದೆ.





