ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗ್ಯಾಂಗ್‌ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಈ ಅರ್ಜಿಯನ್ನು ಜನವರಿ.24 ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್ ಗ್ಯಾಂಗ್ ಪಡೆದಿರುವ ಜಾಮೀನನ್ನು ಪ್ರಶ್ನಿಸಿ ಜನವರಿ.6 ರಂದು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿರುವ ಈ ಅರ್ಜಿ ಅನ್ವಯ ಸುಪ್ರೀಂಕೋರ್ಟ್ ಜನವರಿ.24 ರಂದು ಅರ್ಜಿ ವಿಚಾರಣೆಯನ್ನು ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೈಕೋರ್ಟ್‌ನ ಏಕ ಸದಸ್ಯ ಪೀಠವೂ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ಗೆ ಮಧ್ಯಂತರ ಹಾಗೂ ರೆಗ್ಯುಲರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಎ1 ಆರೋಪಿ ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೋಶ್ ಅವರಿಗೂ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಸರ್ಕಾರದ ಅನುಮತಿ ಪಡೆದು ಈ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.