Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಟ ದರ್ಶನ್‌ಗೆ ಬಿಗ್‌ ಶಾಕ್:‌ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್‍ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ.

ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣ. ಎಂತಹ ನಾಗರಿಕ ಸಮಾಜವು ತಲೆತಗ್ಗಿಸುವ ಘಟನೆ ಇದಾಗಿದ್ದು, ಆರೋಪಿ ಸ್ಥಾನದಲ್ಲಿರುವ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ನೀಡಿರುವ ಷರತ್ತುಬದ್ಧ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಲಾಗಿದೆ.

ಕಳೆದ ಡಿಸೆಂಬರ್.13ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿಯಾಗಿದ್ದ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್, ಎ3 ಪವನ್, ಎ4 ಜಗದೀಶ್, ಎ5 ನಂದೀಶ್, ಎ7 ಅನುಕುಮಾರ್, ಎ9 ಧನರಾಜ್, ಎ10 ವಿನಯ್, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೂಷ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.

ಇದೀಗ ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದುಪಡಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

Tags:
error: Content is protected !!