ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದಿದೆ. ಇಂದು ಅಂತಿಮ ವರದಿ ಸಲ್ಲಿಕೆ ಮಾಡಿದ್ದೇವೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ ಎಂದರು.
ಸಿಆರ್‌ಪಿಸಿ 173(8) ಅಡಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಪ್ರಕರಣ ಸಂಬಂಧ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಸಿಎಫ್‌ಎಲ್ ವರದಿಗಳು ಕೂಡ ಬಂದಿವೆ. ಕೆಲ ಸಿಎಫ್‌ಎಸ್‌ಎಲ್ ವರದಿ ಬರಬೇಕಿದೆ ಎಂದು ತಿಳಿಸಿದರು.