Mysore
30
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯವು ಮುಂದೂಡಿದೆ.

ಹೈಕೋರ್ಟ್‌ನಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಹಾಗೂ ವಿಚಾರಣೆ ಚಾಲ್ತಿಯಲ್ಲಿರುವುದರಿಂದ ಮತ್ತು ಅಂತಿಮ ಆದೇಶ ಇನ್ನೂ ಬಾರದಿರುವ ಹಿನ್ನೆಲೆಯಲ್ಲಿ, ವಿಚಾರಣೆಗೆ ಹೆಚ್ಚಿನಾವಕಾಶ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರು ಪ್ರಸನ್ನಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಎಸ್‌ಪಿಪಿ ಅವರ ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು, ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದಿನ ದಿನಕ್ಕೆ ಕಾಯ್ದಿರಿಸಿದೆ.

ಇತ್ತೀಚೆಗೆ 59ನೇ ಸಿಸಿಹೆಚ್ ಕೋರ್ಟ್ ಎ-14 ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯನ್ನು ಪುರಸ್ಕರಿಸಿತ್ತು. ಇದು ಪ್ರಕರಣದಲ್ಲಿ ಮಹತ್ವದ ತಿರುವು ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು.

 

Tags:
error: Content is protected !!