ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯವು ಮುಂದೂಡಿದೆ.
ಹೈಕೋರ್ಟ್ನಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಹಾಗೂ ವಿಚಾರಣೆ ಚಾಲ್ತಿಯಲ್ಲಿರುವುದರಿಂದ ಮತ್ತು ಅಂತಿಮ ಆದೇಶ ಇನ್ನೂ ಬಾರದಿರುವ ಹಿನ್ನೆಲೆಯಲ್ಲಿ, ವಿಚಾರಣೆಗೆ ಹೆಚ್ಚಿನಾವಕಾಶ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರು ಪ್ರಸನ್ನಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಎಸ್ಪಿಪಿ ಅವರ ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು, ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದಿನ ದಿನಕ್ಕೆ ಕಾಯ್ದಿರಿಸಿದೆ.
ಇತ್ತೀಚೆಗೆ 59ನೇ ಸಿಸಿಹೆಚ್ ಕೋರ್ಟ್ ಎ-14 ಆರೋಪಿ ಪ್ರದೋಷ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯನ್ನು ಪುರಸ್ಕರಿಸಿತ್ತು. ಇದು ಪ್ರಕರಣದಲ್ಲಿ ಮಹತ್ವದ ತಿರುವು ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…