Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ಗೆ ಸದ್ಯಕ್ಕೆ ರಿಲೀಫ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ.

ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್‌ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯುಲರ್‌ ಬೇಲ್‌ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಆರೋಪಿ ದರ್ಶನ್‌ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಆರೋಪಿ ದರ್ಶನ್‌ಗೆ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳಲಾಗುತ್ತದೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ. ಡಿಸೆಂಬರ್‌.11ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ. ಹೀಗಾಗಿ ದರ್ಶನ್‌ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ. ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ಗೆ ಹಿರಿಯ ವಕೀಲ ಸಿ.ವಿ.ನಾಗೇಶ್‌ ಮನವಿ ಮಾಡಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್‌ ಸೇರಿದಂತೆ ಏಳು ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯುಲರ್‌ ಬೇಲ್‌ ಸಿಗುವವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.

 

Tags:
error: Content is protected !!