ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.11ಕ್ಕೆ ಮುಕ್ತಾಯವಾಗಲಿದೆ.
ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯುಲರ್ ಬೇಲ್ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಆರೋಪಿ ದರ್ಶನ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆರೋಪಿ ದರ್ಶನ್‌ಗೆ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳಲಾಗುತ್ತದೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ. ಡಿಸೆಂಬರ್.11ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ. ಹೀಗಾಗಿ ದರ್ಶನ್ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ. ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಮನವಿ ಮಾಡಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್ ಸೇರಿದಂತೆ ಏಳು ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯುಲರ್ ಬೇಲ್ ಸಿಗುವವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…