ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕಳೆದ ಜೂನ್ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿನ ಜನನವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮೃತ ರೇಣುಕಾಸ್ವಾಮಿ ಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ಇದೇ ವೇಳೆ ರೇಣುಕಾಸ್ವಾಮಿ ತಂದೆ ಶಿವನಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮಗನೇ ಮತ್ತೊಮ್ಮೆ ಹುಟ್ಟಿ ಬಂದಷ್ಟು ಸಂತೋಷವಾಗಿದೆ. ನನ್ನ ಸೊಸೆ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅಲ್ಲದೇ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮಗನ ಕಳೆದುಕೊಂಡ ದುಃಖದ ಬೆನ್ನಲ್ಲೇ ಕೊಂಚ ಸಂತಸ ವ್ಯಕ್ತಪಡಿಸಿದ್ದಾರೆ.





