ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಮೃತ ದೇಹ ಪತ್ತೆಯಾಗಿತ್ತು. ಪತ್ತೆಯಾದ ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ದರ್ಶನ್ ಆಪ್ತೆ ಪವಿತ್ರಾ ಅವರಿಗೆ ರೇಣುಕಾಸ್ವಾಮಿ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಎಂದು ಆತನನ್ನು ದುರ್ಗದಿಂದ ಬೆಂಗಳೂರಿಗೆ ಕರೆತಂದು ಖಾಸಗಿ ಶೆಡ್‌ನಲ್ಲಿ ಹಲ್ಲೆ ಮಾಡಿ ಕೊಲ್ಲಲಾಗಿದೆ ಎಂದು ಹಳಲಾಗುತ್ತಿತ್ತು. ಇತ್ತ ದರ್ಶನ್ ಅವರು ರೇಣುಕಾ ಮೇಲೆ ಹಲ್ಲೆ ಮಾಡಿ ಕೊಂದಿದ್ದಾರೆ ಎನ್ನಲಾಗಿತ್ತು.
ಇದಕ್ಕೆಲ್ಲಾ ಉತ್ತರ ನೀಡಿರುವ ವೈದ್ಯರು, ರೇಣುಕಾಸ್ವಾಮಿ ಅವರು ಆಘಾತ ಮತ್ತು ರಕ್ತಸ್ರಾವದಿಂದ ಮರಣ ಹೊಂದಿದ್ದಾರೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.
ರೇಣುಕಾಸ್ವಾಮಿ ದೇಹದ ಮೇಲೆ ಸುಮಾರು 15 ಕಡೆಗಳಲ್ಲಿ ಗಾಯದ ಗುರುತುಗಳನ್ನು ಕಾಣಬಹುದಾಗಿದೆ. ಆತನ ತಲೆ, ಹೊಟ್ಟೆ, ಎದೆಯ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಶೆಡ್‌ನಲ್ಲಿದ್ದ ಹಲ್ಲೆಗೆ ಬಳಸಲಾಗಿದೆ ಎಂದು ಸಂಶಯಿಸಲಾದ ಮರದ ದಿಮ್ಮಿಗಳು, ಚರ್ಮದ ಬೆಲ್ಟ್, ಹಗ್ಗವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇತ್ತ ಇಂದು ನ್ಯಾಯಾಂಗ ವಿಚಾರಣೆಗೆ ಒಳಪಟ್ಟ ದರ್ಶನ್ ಅಂಡ್ ಟೀಂಗೆ ಆರ್ಥಿಕ ಅಪರಾಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…