ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ 3991 ಪುಟಗಳಷ್ಟು ಚಾರ್ಜ್‌ಶೀಟ್‌ನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ತನಿಖಾಧಿಕಾರಿ ಚಂದನ್ ನೇತೃತ್ವದಲ್ಲಿ ಎಸ್‌ಪಿಪಿ ಮೂಲಕ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.
ಚಾರ್ಜ್‌ಶೀಟ್‌ನಲ್ಲಿ 250 ಸಾಕ್ಷಿಗಳ ಬಗ್ಗೆ ಉಲ್ಲೇಖಿಸಲಾಗಿದೆ. ನಟ ದರ್ಶನ್ ಎ2, ಪವಿತ್ರಗೌಡ ಎ1 ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾದ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಇದೇ ಸೆಪ್ಟೆಂಬರ್.9ಕ್ಕೆ ಮೂರು ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ.
ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದು, ಚಾರ್ಜ್‌ಶೀಟ್ ಸಲ್ಲಿಕೆ ನಂತರ ಕೋರ್ಟ್ ಪ್ರಕ್ರಿಯೆ ಹೇಗಿರಲಿದೆ ಎಂಬುದೇ ದರ್ಶನ್ ಅಂಡ್ ಗ್ಯಾಂಗ್‌ಗೆ ತೀವ್ರ ಚಿಂತೆಯಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…