ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್.17ರಂದು ವಿಚಾರಣೆ ವೇಳೆ ಹಾಜರಿರುವಂತೆ ಸೂಚನೆ ನೀಡಿದೆ.
ಇದನ್ನು ಓದಿ: ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೊಂದು ಶಾಕ್
ಕೋರ್ಟ್‌ನಲ್ಲಿ ಟ್ರಯಲ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ 7 ಹಾಗೂ 8ನೇ ಸಾಕ್ಷಿಯಾಗಿರುವ ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್ ನೀಡಲಾಗಿದೆ.
ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಇರುವ ಬ್ಯಾರಕ್‌ನಲ್ಲಿ ಟಿವಿ ಅಳವಡಿಸಲು ಕೋರ್ಟ್ ಸೂಚನೆ ನೀಡಿದೆ.





