Mysore
25
broken clouds
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್‌ಶೀಟ್‌ ಸಲ್ಲಿಸಲಾಗುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಎಫ್‌ಎಸ್‌ಎಲ್‌ ವರದಿಗಳು ಬರಬೇಕಿದೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಿದ್ಧವಾಗಿದೆ. ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರಿಗೆ ಚಾರ್ಜ್‌ಶೀಟ್‌ ನೀಡಿ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್‌ ನೋಡಿ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಹಲವು ವರದಿಗಳು ನಮ್ಮ ಕೈಸೇರಬೇಕಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.