ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಲಾಗುತ್ತದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಎಫ್‌ಎಸ್‌ಎಲ್ ವರದಿಗಳು ಬರಬೇಕಿದೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧವಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಚಾರ್ಜ್‌ಶೀಟ್ ನೀಡಿ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್ ನೋಡಿ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಹಲವು ವರದಿಗಳು ನಮ್ಮ ಕೈಸೇರಬೇಕಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…