ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಆದೇಶ ಹೊರಡಿಸಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.
ಇನ್ನು ತೀವ್ರ ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿನಿಂದ ಹೊರಬಂದಿದ್ದು, ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆದರೆ ಕೊಲೆ ಆರೋಪಿ ದರ್ಶನ್‌ಗೆ ಇದುವರೆಗೂ ಆಪರೇಷನ್ ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಜಾಮೀನು ಅವಧಿ ವಿಸ್ತರಿಸುವಂತೆ ಕೋರ್ಟ್‌ಗೆ ದರ್ಶನ್ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದ್ದು, ದರ್ಶನ್ ಜಾಮೀನು ಸಿಗುತ್ತೋ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…