Mysore
31
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ʼಡಿʼ ಗ್ಯಾಂಗ್‌ನ ಮತ್ತಿಬ್ಬರು ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ.

ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು ಜೈಲುಪಾಲಾಗಿದ್ದು, ಇದೀಗ ಪ್ರಕರಣದ 6ನೇ ಆರೋಪಿ ಜಗ್ಗು ಅಲಿಯಾಸ್‌ ಜಗದೀಶ, 7ನೇ ಆರೋಪಿ ಅನಿ ಅಲಿಯಾಸ್‌ ಅನೀಲ್‌ ಎಂಬ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಈ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ 16 ಮಂದಿ ಆರೋಪಿಗಳ ಬಂಧನವಾಗಿದೆ.

 

 

Tags:
error: Content is protected !!