ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ.
ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು ಜೈಲುಪಾಲಾಗಿದ್ದು, ಇದೀಗ ಪ್ರಕರಣದ 6ನೇ ಆರೋಪಿ ಜಗ್ಗು ಅಲಿಯಾಸ್ ಜಗದೀಶ, 7ನೇ ಆರೋಪಿ ಅನಿ ಅಲಿಯಾಸ್ ಅನೀಲ್ ಎಂಬ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಬಳಿಕ ಈ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 16 ಮಂದಿ ಆರೋಪಿಗಳ ಬಂಧನವಾಗಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…