ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯಿಸಿ, ಇದು ಆತಂಕಕಾರಿ ಘಟನೆ, ಕೊಲೆ ವಿಚಾರ ತಿಳಿದು ನನಗೆ ಗಾಬರಿಯಾಗಿದೆ, ಪ್ರಕರಣದ ಬಗ್ಗೆ ತನಿಖೆ ನಡೆದು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.
ಇದು ಚಿತ್ರರಂಗದಲಿ ಆತಂಕ ಸೃಷ್ಟಿಸುವ ಘಟನೆ. ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಶಿಸ್ತು ಮುಖ್ಯ. ದರ್ಶನ್ ಒಳ್ಳೆಯ ಹುಡುಗ ಅಂತ ಅಂದುಕೊಂಡಿದ್ದೆವು. ಕೊಲೆ ವಿಷಯ ತಿಳಿದಾಗ ನನಗೆ ಗಾಬರಿ ಗೊಂದಲ ಆಯಿತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪತಿ ಕಳೆದುಕೊಂಡ ಹೆಣ್ಣುಮಗಳ ನೋವು ಅರ್ಥವಾಗುತ್ತದೆ. ಇಂತಹ ಕೃತ್ಯ ಆಗಬಾರದಿತ್ತು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ನಟಿ ಉಮಾಶ್ರೀ ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…