Mysore
31
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ರೇಣುಕಾಸ್ವಾಮಿ ಕೊಲೆಗೆ ತಿಂಗಳು; ದರ್ಶನ್‌ ಬಗ್ಗೆ ಪರಮೇಶ್ವರ್‌ ಮಾತು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಇಡೀ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಕುರಿತು ಮಾತನಾಡಿ, ಕೊಲೆ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಸಾಕ್ಷ್ಯಗಳ ಸಂಗ್ರಹ ನಡೆಯುತ್ತಿದೆ ಎಂದರು.

ಮಾಧ್ಯಮದವರು ಹೇಳಿದರೆಂದು ಪ್ರಕರಣವನ್ನು ಫಾಸ್ಟ್‌ ಫಾರ್ವರ್ಡ್‌ ಮಾಡಲಾಗುತ್ತಾ? ಅದಕ್ಕೆಲ್ಲಾ ಸಮಯ ಹಿಡಿಯುತ್ತದೆ. ತನಿಖೆಯ ಪ್ರಕ್ರಿಯೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಚಾರ್ಚ್‌ಶೀಟ್‌ ಸಲ್ಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ. ಮಾಡೋದು ಇಲ್ಲ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!