ರಾಜ್ಯ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು ಕಳೆದಿದ್ದು, ಪೊಲೀಸ್‌ ಸಿಬ್ಬಂದಿ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸ್‌ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕಷ್ಟು ಜವಾಬ್ದಾರಿ ವಹಿಸಿದ್ದಾರೆ. ತನಿಖೆಯ ವಿಚಾರವಾಗಿ ಎಲ್ಲಿಯೂ ಕೂಡ ಪೊಲೀಸರು ಕಿಂಚಿತ್ತೂ ರಾಜಿಯಾಗಿಲ್ಲ. ತನಿಖೆಯ ಅವಧಿಯಲ್ಲಿ ನೂರಾರು ಸಾಕ್ಷ್ಯಗಳನ್ನು ಕಲೆಹಾಕಿ ಸಾವಿರಾರು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

ಕಮಿಷನರ್‌ ದಯಾನಂದ್‌ ಹಾಗೂ ಡಿಸಿಪಿ ಗಿರೀಶ್‌ ನೇತೃತ್ವದ ತಂಡವು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ಮಾಡಿರುವುದಕ್ಕೆ ಅಷ್ಟೊಂದು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದು ಪ್ರಮುಖ ಸಾಕ್ಷಿಯಾಗಿದೆ.

ತನಿಖಾ ಹಂತದಲ್ಲಿ ಒಂದು ವೇಳೆ ಯಾಮಾರಿದ್ದರೆ ಪೊಲೀಸರಿಗೆ ಯಾವುದೇ ಪ್ರಮುಖ ಸಾಕ್ಷ್ಯಗಳು ಸಿಗುತ್ತಿರಲಿಲ್ಲ. ದರ್ಶನ್‌ ಅಂಡ್‌ ಗ್ಯಾಂಗ್‌ ವಿಚಾರದಲ್ಲಿ ತೆಗದುಕೊಂಡ ನಿರ್ಧಾರ ಪೊಲೀಸ್‌ ಹಾಗೂ ಕಾನೂನಿನ ಮೇಲೆ ಜನರಲ್ಲಿ ಅತೀ ಹೆಚ್ಚು ನಂಬಿಕೆ ಹುಟ್ಟಿಸಿದೆ.

ಡಿ ಗ್ಯಾಂಗ್‌ ಬಂಧನದ ಬಳಿಕ ಪೊಲೀಸರಿಗೆ ಸಾಕಷ್ಟು ಒತ್ತಡವಿದ್ದರೂ ಯಾವುದಕ್ಕೂ ಬಗ್ಗದ ಅವರು ಕರ್ತವ್ಯ ಪ್ರಜ್ಞೆ ಮೆರೆದಿದ್ದು, ಪೊಲೀಸರ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಶಹಬ್ಬಾಸ್‌ ಎಂದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

10 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

11 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

12 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

12 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

12 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

13 hours ago