Mysore
27
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಸರ್ಕಾರಿ ಉದ್ಯೋಗ ನೀಡುವಂತೆ ಸಿಎಂ ಬಳಿ ರೇಣುಕಾಸ್ವಾಮಿ ತಂದೆ-ತಾಯಿ ಬೇಡಿಕೆ

ಬೆಂಗಳೂರು : ನಟ ದರ್ಶನ್ ಗ್ಯಾಂಗ್‌ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾವಿಗೀಡಾದ ರೇಣುಕಾಸ್ವಾಮಿ ತಂದೆ ಮತ್ತು ತಾಯಿ ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.


ಮಗನ ಸಾವಿನ ಕೇಸ್‌ ನಲ್ಲಿ ನಡೆಯುತ್ತಿರುವ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಅವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿಗಳು ಕೂಡ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಮತ್ತು ಮಾಜಿ ಸಚಿವ ಆಂಜನೇಯ ಇದ್ದರು.

Tags:
error: Content is protected !!