ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನು ಓದಿ: ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ
ಕೆಲವು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇನೆ ಇರಲಿ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.
ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾಗಿರುವ ರೇಣುಕಾಸ್ವಾಮಿ ಸಮಾಧಿ ಚಿತ್ರದುರ್ಗದಲ್ಲಿದೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಹಾನಿಯಾಗಿದೆ ಎಂದು ಶಂಕಿಸಲಾಗಿದೆ.




