ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು, ಈ ತೀರ್ಪಿನಿಂದ ನಮಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಿತು ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನಿಂದ ಕಳವಳವುಂಟಾಗಿತ್ತು. ಮಗನನ್ನು ಹತ್ಯೆಗೈದ ದರ್ಶನ್ ಹಾಗೂ ಗ್ಯಾಂಗ್‌ಗೆ ಸುಲಭದಲ್ಲಿ ಜಾಮೀನು ಮಂಜೂರಾಗಿದ್ದು ಒಂದು ರೀತಿಯ ಆಘಾತವಾಗಿತ್ತು.
ಆರೋಪಿಗಳಿಗೆ ಶಿಕ್ಷೆಯಾಗಲೇಬೇಕು ಎಂಬುದು ನಮ್ಮ ಪ್ರಾರ್ಥನೆ. ಈಗ ಸುಪ್ರೀಂಕೋರ್ಟ್ ಆರೋಪಿಗಳಿಗೆ ಜಾಮೀನು ರದ್ದು ಮಾಡಿರುವುದು ಸಮಾಧಾನ ತಂದಿದೆ. ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…