ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI), ರೆಪೊ ರೇಟ್ 25 ಬೇಸಿಸ್ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಹಣದುಬ್ಬರ, ಒಟ್ಟು ರಾಷ್ಟ್ರೀಯ ಉತ್ಪನ್ನದ (GDP) ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿಯುವ ಸಮಯದಲ್ಲಿ ರೆಪೊ ದರ ಕಡಿಮೆ ಮಾಡಿರುವ ಆರ್‌ಬಿಐನ ನಿರ್ಧಾರ ತುಂಬಾ ಸೂಕ್ತವಾಗಿದೆ ಎಂದು ತಿಳಿಸಿದರು.
ರೆಪೊ ದರ ಕಡಿಮೆಯಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಬಡ್ಡಿದರದಿಂದ ನರಳುತ್ತಿರುವ ಎಂಎಸ್‌ಎಂಇಗಳು, ಉತ್ಪಾದನೆ, ರಿಯಲ್ ಎಸ್ಟೇಟ್ ಮತ್ತು ಕೈಗಾರಿಕೆಗಳು ಇದರ ಪ್ರಯೋಜನ ಪಡೆಯಲಿವೆ. ಇದು ಭಾರತದ ಆರ್ಥಿಕ ಬೆಳವಣಿಗೆಯ ಪಥವನ್ನು ಬಲಪಡಿಸುತ್ತದೆ ಎಂದು ಹೇಳಿದರು.
ಅಲ್ಲದೇ, ದೇಶಿಯ ಉದ್ಯಮಗಳಿಗೆ ಬೆಂಬಲ ನೀಡುವುದಲ್ಲದೇ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತದೆ. ಕರ್ನಾಟಕ ಮತ್ತು ಭಾರತವನ್ನು ವ್ಯಾಪಾರ ವಿಸ್ತರಣೆಗೆ ಆಕರ್ಷಕ ತಾಣವನ್ನಾಗಿ ಮಾಡುತ್ತದೆ. ಈ ದರ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತ್ವರಿತವಾಗಿ ವರ್ಗಾಯಿಸುವಂತೆ FKCCI ಒತ್ತಾಯಿಸುತ್ತದೆ ಎಂದು ಎಂ.ಜಿ.ಬಾಲಕೃಷ್ಣ ಹೇಳಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…