ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.
ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.