ಬೆಂಗಳೂರು: ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಭಾನುವಾರ ಧ್ವಜರೋಹಣ ನೆರವೇರಿಸಿದರು.
ಭಾರತೀಯ ರಕ್ಷಣ ಪಡೆಯ ಮೂವರು ಹಿರಿಯ ಅಧಿಕಾರಿಗಳನ್ನು ರಾಜ್ಯಪಾಲರಿಗೆ ಪರಿಚಯಿಸಲಾಯಿತು.
ಪೊಲೀಸ್, ಗೃಹರಕ್ಷಕ, ಎನ್‌ಸಿಸಿ, ಸಹಿತ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಬ್ಯಾಂಡ್ ಸಾತ್ ನೀಡಿತು.
ಬಳಿಕ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.