ರಾಜ್ಯ

ಗಣರಾಜ್ಯೋತ್ಸವ ಪಥ ಸಂಚಲನ | ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಮನವಿ

ಹೊಸದಿಲ್ಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago