Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ತಿರುಪತಿ, ಶ್ರೀಶೈಲದಲ್ಲಿ ಕನ್ನಡಿಗರ ಸೌಲಭ್ಯಕ್ಕೆ ಮನವಿ

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಶೈಲಕ್ಕೆ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಅವರಿಗೆ ವಸತಿ ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಭೂಮಿ ಮತ್ತಿತರೆ ಸೌಲಭ್ಯಕ್ಕಾಗಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೂ ಆಂಧ್ರಪ್ರದೇಶಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಪಂಚ ದ್ರಾವಿಡ ಭಾಷೆಗಳಲ್ಲಿ ಕನ್ನಡ ಮತ್ತು ತೆಲುಗು ಎರಡೂ ಭಾಷೆ ಸೇರುತ್ತವೆ. ನಮ್ಮ ಭಾಷೆ ಬೇರೆ ಆದರೂ ಭಾವನೆಗಳು ಒಂದೇ ಆಗಿದೆ. ಎರಡೂ ಭಾಷೆಯ ಲಿಪಿಗಳ ನಡುವೆ ಸಾಮ್ಯತೆ ಇದೆ. ಎರಡೂ ರಾಜ್ಯಗಳ ಜನರ ನಡುವೆ ಸಮನ್ವಯತೆ, ಸೋದರತ್ವ ಇದೆ ಎಂದರು.

ನನ್ನ ತವರು ಜಿಲ್ಲೆ ಬೀದರ್ ಗಡಿಯಲ್ಲೇ ಅವಿಭಜಿತ ಆಂಧ್ರಪ್ರದೇಶ ಇತ್ತು. ಈಗ ತೆಲಂಗಾಣ ಆಗಿದೆ. ಕಲ್ಯಾಣ ಕರ್ನಾಟಕ ಭಾಗದ ನಮಗೆ ಹೈದ್ರಾಬಾದ್ ಹತ್ತಿರದಲ್ಲೇ ಇದೆ. ಹೈದ್ರಾಬಾದ್ ನಲ್ಲಿ ನಮ್ಮ ಭಾಗದ ಹಲವರು ಉದ್ಯೋಗ – ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಜೊತೆ ವೈವಾಹಿಕ ಸಂಬಂಧಗಳೂ ಇವೆ. ಇದು ಶತ ಶತಮಾನಗಳಿಂದ ನಡೆಯುತ್ತಿದ್ದು. ಆಂಧ್ರ ಮತ್ತು ಕರ್ನಾಟಕದ ನಡುವೆ ಅವಿನಾಭಾವ ಸಂಬಂಧ ಇದೆ ಎಂದರು.

ನಮ್ಮ ಎರಡೂ ರಾಜ್ಯಗಳ ನಡುವೆ ಬಾಂಧವ್ಯ ಇರಬೇಕು. ನಾವು ಹೊರ ರಾಷ್ಟ್ರಗಳಿಂದ ಕೂಡ ನಮ್ಮ ಮೃಗಾಲಯಗಳಿಗೆ ಪ್ರಾಣಿಗಳನ್ನು ತರಿಸಿಕೊಳ್ಳುತ್ತೇವೆ. ನಮ್ಮಲ್ಲಿ ಹೆಚ್ಚಾಗಿರುವ ಪ್ರಾಣಿಗಳನ್ನು ಇತರ ರಾಷ್ಟ್ರಗಳಿಗೂ ನೀಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Tags: