Categories: ರಾಜ್ಯ

ಸಹಕಾರ ಪದವೀಧರರಿಗೆ ಮೀಸಲಾತಿ: ಸಿಎಂ ಭರವಸೆ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಕರೆ ನೀಡಿದರು.

ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹ ಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago