Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ| ಉದ್ಯಮಿಗಳಿಂದ ವಿರೋಧ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ನಿನ್ನೆ(ಜು.16) ನಡೆದ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ, ಇದಕ್ಕೆ ಉದ್ಯಮಿ ಮೋಹನ್‌ ದಾಸ್‌ ಪೈ ಸೇರಿದಂತೆ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆ ವಿಚಾರವಾಗಿ ಟ್ವೀಟ್‌ ಮಾಡಿರುವ ಉದ್ಯಮಿ ಮೋಹನ್‌ ದಾಸ್‌ ಪೈ, ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ಮುಂದುವರೆದು, ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ? ಕಾಂಗ್ರಸ್‌ ಸರ್ಕಾರ ಇಂತಹ ಮಸೂದೆ ಜಾರಿ ಮಾಡಲು ಮುಂದಾಗಿರುವುದು ನಂಬಲು ಅಸಾಧ್ಯ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ʼಟೆಕ್‌ ಹಬ್‌ ಆಗಿ ನುರಿತ ಪ್ರತಿಭೆಗಳ ಅಗತ್ಯವಿದೆ. ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯ ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು. ಈ ನೀತಿಯಿಂದ ಹೆಚ್ಚು ನುರಿತ ನೇಮಕಾತಿಗೆ ವಿನಾಯಿತಿ ನೀಡುವ ಎಚ್ಚರಿಕೆಗಳು ಇರಬೇಕುʼ ಎಂದು ಕಿರಣ್‌ ಮಜುಂದಾರ್‌ ಬಯೋಕಾನ್‌ ಲಿಮಿಟೆಡ್‌ನ ಕಾರ್ಯನಿರ್ವಹಕ ಅಧ್ಯಕ್ಷ ಮುಂಜುಂದಾರ್‌ ಸಲಹೆ ನೀಡಿದ್ದಾರೆ.

 

Tags: