ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ವಿಧೇಯಕ 2025 ಅನ್ನು ನಿನ್ನೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಸದನದಲ್ಲಿ ವಿಧೇಯಕ ಮಂಡನೆ ಮಾಡಿದ್ದರು. ಆದರೆ ಇದೀಗ ವಿಧೇಯಕ ಮಂಡನೆ ಹಿನ್ನೆಲೆ ರಾಜ್ಯ ಸರ್ಕಾರದ ನಡೆಗೆ ವಿರೋಧ ವ್ಯಕ್ತ ಪಡಿಸಿ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ಸೂಚಿಸಬಾರದು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಬೇಕೆಂದು ಸೋಮವಾರ ಸದನದಲ್ಲಿ ಬಿಲ್ ಮಂಡಿಸಿರುವುದು ಸಂವಿಧಾನ ಬಾಹಿರವಾಗಿದೆ. ಹೀಗಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…