ರಾಜ್ಯ

ಗುತ್ತಿಗೆಯಲ್ಲಿ ಮುಸ್ಲಿಮ್‌ರಿಗೆ ಮೀಸಲಾತಿ: ರಾಜ್ಯಪಾಲರಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ವಿಧೇಯಕ 2025 ಅನ್ನು ನಿನ್ನೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು ಸದನದಲ್ಲಿ ವಿಧೇಯಕ ಮಂಡನೆ ಮಾಡಿದ್ದರು. ಆದರೆ ಇದೀಗ ವಿಧೇಯಕ ಮಂಡನೆ ಹಿನ್ನೆಲೆ ರಾಜ್ಯ ಸರ್ಕಾರದ ನಡೆಗೆ ವಿರೋಧ ವ್ಯಕ್ತ ಪಡಿಸಿ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ಸೂಚಿಸಬಾರದು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಬೇಕೆಂದು ಸೋಮವಾರ ಸದನದಲ್ಲಿ ಬಿಲ್‌ ಮಂಡಿಸಿರುವುದು ಸಂವಿಧಾನ ಬಾಹಿರವಾಗಿದೆ. ಹೀಗಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago