ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ(ಜು.16) ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ ಅವರ, ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.





